ಬೆಳಗಾವಿ: ನಾಗರಪಂಚಮಿ ಹಬ್ಬದ ದಿನದಂದೇ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದಿದೆ.
ರಾಯಬಾಗ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43) ಮೃತಪಟ್ಟ ದುರ್ದೈವಿ.
ನಾಗರಪಂಚಮಿ ಹಬ್ಬದ ದಿನವಾದರೂ ಸತ್ಯವ್ವ ಅವರು ಮನೆಯಲ್ಲಿ ಕೂರದೆ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಕಸ ಕೀಳುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಹಸಿರು ಕಳೆಗಳ ನಡುವೆ ಅವಿತುಕೊಂಡಿದ್ದ ವಿಷಪೂರಿತ ಕೊಳಕಮಂಡಲ ಹಾವು ಸತ್ಯವ್ವ ಅವರ ಕೈಗೆ ಕಚ್ಚಿದೆ.
ಹಾವು ಕಚ್ಚಿದ ತಕ್ಷಣವೇ ದೇಹಕ್ಕೆ ವಿಷ ಏರಿ ಅವರು ತೀವ್ರ ಅಸ್ವಸ್ಥರಾಗಿದ್ದರು. ವಿಷಯ ತಿಳಿದ ತಕ್ಷಣ ಅಕ್ಕಪಕ್ಕದ ರೈತರ ಸಹಾಯದೊಂದಿಗೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಈ ಕುರಿತು ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
