ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಮೃತದೇಹಕ್ಕೆ ಬೆಂಕಿ ಹಚ್ಚಿರುವ ಧಾತೂsetup ಘಟನೆ ಬೆಳಕಿಗೆ ಬಂದಿದೆ.
ಜೂನ್ 8ರಂದು ಸಂಜೆ 7:00 ರಿಂದ ರಾತ್ರಿ 10:15 ರ ಅವಧಿಯಲ್ಲಿ ಕನಕಗಿರಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿ ನಿವಾಸಿ (43 ವರ್ಷ) ಎಂದು ಗುರುತಿಸಲಾಗಿದೆ. ಈಕೆ ಕುಷ್ಟಗಿ ತಾಲೂಕಿನ 30 ವರ್ಷದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ.
ಘಟನೆ ನಡೆದ ರಾತ್ರಿ ಆರೋಪಿ ಪ್ರಿಯಕರನು ಮಹಿಳೆಯನ್ನು ಕನಕಗಿರಿಯ ನಿರ್ಮಾಣ ಹಂತದಲ್ಲಿದ್ದ ಮನೆಗೆ ಕರೆತಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ತೀವ್ರ ಜಗಳ ನಡೆದಿದ್ದು, ಆಕ್ರೋಶಗೊಂಡ ಆರೋಪಿ ಮಹಿಳೆಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ತದನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹಕ್ಕೆ ಕಂಬಳಿ ಸುತ್ತಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಸಂಗನೇಗೌಡ ಮಾಲಿಪಾಟೀಲ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 91/2026, ಸೆಕ್ಷನ್ 103(1), 238 BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಅಪರಾಧಕ್ಕೆ ಬಳಸಲಾದ ಕಂಬಳಿ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಬೇರೆ ಸಮುದಾಯಕ್ಕೆ ಸೇರಿದವನಾಗಿರುವುದರಿಂದ ಆತನ ವಿರುದ್ಧ ಎಸ್ ಸಿ/ಎಸ್ ಟಿ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸೆಕ್ಷನ್ 3(2)(5) ರ ಅಡಿಯೂ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


