ಶಿರಾ: ಮೈಕ್ರೊಫೈನಾನ್ಸ್ ಚಿತ್ರಹಿಂಸೆಗೆ ಮಹಿಳೆ ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕು ಕಸಬಾ ಹೋಬಳಿ ಚಿಕ್ಕನಕೋಟೆಯಲ್ಲಿ ನಡೆದಿದೆ.
ಸುಮಾರು 35 ವರ್ಷದ ಲೀಲಾವತಿ ನೇಣಿಗೆ ಶರಣಾಗಿದ್ದಾರೆ. ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸುಮಾರು 9 ಲಕ್ಷ ರೂ. ಸಾಲ ಮಾಡಿದ್ದ ಮಹಿಳೆ, ಮೈಕ್ರೋ ಫೈನಾನ್ಸ್ ನವರ ಚಿತ್ರಹಿಂಸೆಗೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ.
ಪತಿ ಹಾಗೂ 13 ವರ್ಷದ ಹಾಗೂ 5 ವರ್ಷದ ಇಬ್ಬರು ಗಂಡು ಮಕ್ಕಳನ್ನು ಬಿಟ್ಟು ಮಹಿಳೆ ನೇಣಿಗೆ ಶರಣಾಗಿದ್ದಾರೆ. ಈ ಮೂಲಕ ಮೈಕ್ರೋ ಫೈನಾನ್ಸ್ ಚಿತ್ರಹಿಂಸೆಗೆ ಮತ್ತೊಂದು ಬಲಿಯಾಗಿದೆ.
ಮೈಕ್ರೋ ಫೈನಾನ್ಸ್ ನಿಂದಾಗಿ ಸಾವಿನ ಸರಣಿ ಮುಂದುವರಿದಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಠಿಣ ಕಾನೂನಿನ ಅವಶ್ಯಕತೆ ಇದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4