ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಅರಿಶಿಣ ಕುಂಕುಮ ಪಡೆಯಲು ಹೋಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿ ನಡೆದಿದೆ.
ಗೀತಾ (23) ಗೀತಾ ಎರಡೂವರೆ ತಿಂಗಳ ಹಿಂದಷ್ಟೇ ಸುನೀಲ್ ಎಂಬವರನ್ನು ವಿವಾಹವಾಗಿದ್ದರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಅರಿಶಿಣ ಕುಂಕುಮ ಪಡೆಯಲೆಂದು ನಂದಿನಿ ಲೇಔಟ್‌ನಲ್ಲಿರುವ ನಾದಿನಿ ಮನೆಗೆ ದಂಪತಿ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಲಗ್ಗೆರೆ ಬ್ರಿಡ್ಜ್ ಬಳಿ ಬೈಕ್ ಗೆ ಲಾರಿ ಡಿಕ್ಕಿಯಾಗಿದೆ. ಘಟನೆಯಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗೀತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಡ ಸುನೀಲ್ ಗೆ ಗಾಯಗಳಾಗಿವೆ.
ಘಟನೆ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತ ಸಂಬಂಧ ಲಾರಿ ಚಾಲಕ ಸುರೇಶ್ ನನ್ನು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC