ಮಂಗಳೂರು: ಮಂಗಳೂರಿನ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಯಿಂದಾಗಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನವೊಂದು ಉರುಳಿಬಿದ್ದಿದೆ. ಈ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಯೊಬ್ಬರು ಚಲಿಸುತ್ತಿದ್ದ ಲಾರಿಯ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯ ಬೆನ್ನಲ್ಲೇ ಮಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದ್ವಿಚಕ್ರ ವಾಹನ ಓಡಿಸುತ್ತಿದ್ದ ಮಹಿಳೆಯೊಬ್ಬರು ರಸ್ತೆಯ ಗುಂಡಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ವಾಹನದೊಂದಿಗೆ ರಸ್ತೆಗೆ ಉರುಳಿ ಬಿದ್ದಿದ್ದು, ಈ ವೇಳೆಯಲ್ಲಿ ಲಾರಿಯೊಂದು ಮಹಿಳೆಯ ಮೇಲೆಯೇ ಹರಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ.
ಸೆಪ್ಟೆಂಬರ್ 9ರ ಬೆಳಗ್ಗೆ 8–30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಮೃತ ಪಟ್ಟ ಮಹಿಳೆಯನ್ನು ಮಾಧವಿ (44) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕ ಮೊಹಮ್ಮದ್ ಫಾರೂಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


