ತುಮಕೂರು: ವೈಯಕ್ತಿಕ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಗುಬ್ಬಿತಾಲ್ಲೂಕು ಕೆ.ಅರಿವೆಸಂದ್ರ ಗ್ರಾಮದ ಮಂಜುಳ ಎಂಬವರನ್ನು ಮಧು ಎಂಬಾತ ಹತ್ಯೆ ಮಾಡಿ ಪರಾರಿಯಾಗಿದ್ದ.
ಮೃತ ಮಂಜುಳ ಅವರ ಮಗ ಶ್ರೀ ನಿವಾಸ್ ಎಂಬುವರು ಸಿ.ಎಸ್.ಪುರ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದರು. ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 103 (1) ಅನ್ವಯ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಗುಬ್ಬಿ ಸಿಪಿಐ ರಾಘವೇಂದ್ರ ಟಿ.ಆರ್., ಪಿ.ಎಸ್‌ಐ ಧರ್ಮಾಂಜಿ, ಸಿಬ್ಬಂದಿಗಳಾದ ರಾಜು, ತ್ಯಾಗರಾಜು, ನವೀನ್ ಕುಮಾರ್, ವಿಜಯಕುಮಾರ್, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿ ನರಸಿಂಹರಾಜು, ಜಗದೀಶ್ ಮತ್ತು ತಂಡ ಕಾರ್ಯಪ್ರವೃತ್ತರಾಗಿ ಪ್ರಕರಣದ ಆರೋಪಿ ಮಧು ಎಂಬಾತನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


