ಬೆಂಗಳೂರು: ಬೈಕ್ ಟಾಕ್ಸಿ ಚಾಲಕನೊಬ್ಬ ಪ್ರಯಾಣಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಬೈಕ್ ಸವಾರಿ ಮಾಡುವಾಗ ಬೈಕ್ ಚಾಲಕ ಮಹಿಳಾ ಪ್ರಯಾಣಿಕರ ಕಾಲನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಈ ಕೃತ್ಯದ ವಿಡಿಯೋ ರೆಕಾರ್ಡ್ ಕೂಡ ಮಾಡಿದ್ದು ಈ ವಿಡಿಯೋ ವೈರಲ್ ಆಗುತ್ತಿದೆ.
ಇನ್ನು ಈ ಸಂಬಂಧ ಮಹಿಳೆ ರಾಪಿಡೋ ಬೈಕ್ ಟ್ಯಾಕ್ಸಿ ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ದೂರಿನ ಪ್ರಕಾರ, ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಿಲ್ಸನ್ ಗಾರ್ಡನ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


