ಬೆಂಗಳೂರು: ಯುವಕನೊಬ್ಬ ಮಹಿಳೆಯೊಬ್ಬರಿಗೆ ತನ್ನ ಮಾರ್ಮಾಂಗ ತೋರಿಸಿ, ಅಶ್ಲೀಲ ಸನ್ನೆ ಮಾಡಿದ್ದು, ಇದನ್ನು ಪ್ರಶ್ನಿಸಿದ ಮಹಿಳೆಯ ಪತಿ ಸೇರಿದಂತೆ ಏಳು ಜನರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಏಪ್ರಿಲ್ 13 ರಂದು ಈ ಘಟನೆ ನಡೆದಿದೆ. ಆರೋಪಿ ತನ್ನ ತಾಯಿ ಮೇಲೂ ಮೇಲೂ ಹಲ್ಲೆ ನಡೆಸಿದ್ದಾನೆ. ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಬಳಿಕ ಸ್ಥಳದಿಂದ ಪರಾರಿಯಾಗಿರುವ ಕಾಮುಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ.
ಅಂದಹಾಗೆ, ಗೃಹಿಣಿಯೊಬ್ಬಳು ತನ್ನ ಮನೆಯ ಎರಡನೇ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರು ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿ ತನ್ನ ಪ್ಯಾಂಟ್ ಜೀಪ್ ಬಿಚ್ಚಿ ಮಾರ್ಮಾಂಗವನ್ನು ತೋರಿಸಿದ್ದಾನೆ. ಅಲ್ಲದೇ ಅಶ್ಲೀಲ ಸನ್ನೆಗಳ ಮೂಲಕ ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ. ಇದರಿಂದ ವಿಚಲಿತಳಾದ ಮಹಿಳೆ ತನ್ನ ಪತಿಯನ್ನು ಸಹಾಯಕ್ಕಾಗಿ ಕರೆದಿದ್ದಾಳೆ. ಇದರಿಂದ ಆಕ್ರೋಶಗೊಂಡ ಆರೋಪಿಯು ಪತಿ ಮೇಲೆ ಹಲ್ಲೆ ನಡೆಸಲಾರಂಭಿಸಿದ್ದಾರೆ.
ಜಗಳ ಬಿಡಿಸಲು ಬಂದ ನೆರೆಹೊರೆಯವರ ಮೇಲೂ ಹಾಲೊ ಬ್ಲಾಕ್ ಗಳು, ಹೂವಿನ ಕುಂಡಗಳು ಮತ್ತು ಕಿಟಕಿಯ ಗಾಜುಗಳಿಂದ ಹಲ್ಲೆ ನಡೆಸಿದ್ದಾನೆ. ತಡೆಯಲು ಬಂದ ತನ್ನ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————