ರಾಯಬಾಗ(ಬೆಳಗಾವಿ): ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಬಾವಿಗೆ ದೂಡಿ ತಾನೂ ಬಾವಿಗೆ ಜಿಗಿದು ಸಾವಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಯಲ್ಲವ್ವ ಅರ್ಜುನ ಕರಿಹೊಳೆ(30), ಅವರ ಮಕ್ಕಳಾದ ಸ್ವಾತಿ(5), ಮುತ್ತಪ್ಪ(1) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಪತಿ ಅರ್ಜುನನ ಜೊತೆಗೆ ಯಲ್ಲವ್ವ ಭಾನುವಾರ ಬೆಳಗ್ಗೆ ಜಗಳವಾಡಿದ್ದರು. ಪತಿ ಕೃಷಿ ಭೂಮಿಯತ್ತ ತೆರಳಿದ ಬಳಿಕ ಬಾವಿಗೆ ಜಿಗಿದು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಮೃತರ ತಾಯಿ ಶೋಭಾ ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಯಲ್ಲವ್ವಳ ಪತಿ ವಿಪರೀತ ಮದ್ಯ ವ್ಯಸನಿಯಾಗಿದ್ದ. ವರದಕ್ಷಿಣೆ ಕಿರುಕುಳ ಕೂಡ ನೀಡುತ್ತಿದ್ದ. ಆತನೇ ಹತ್ಯೆ ಮಾಡಿರುವ ಶಂಕೆ ಇದೆ ಎಂದು ರಾಯಭಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296