ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ನಡೆದಿದೆ.
ಹುಚ್ಚಮ್ಮ ಎಂಬ ವೃದ್ಧೆ ಹಲ್ಲೆಗೊಳಗಾದವರಾಗಿದ್ದಾರೆ. ಇವರ ನೆರೆಯಮನೆಯ ಪ್ರೇಮಾ ಎಂಬವರು ಕಸ ತಂದು ಹುಚ್ಚಮ್ಮ ಅವರ ಮನೆಯ ಮುಂದೆ ಸುರಿದಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪ್ರೇಮ, ಜೊತೆಗೆ ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರು, ಹುಚ್ಚಮ್ಮನವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಮರಕ್ಕೆ ಹಗ್ಗದಿಂದ ಕಟ್ಟಿ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಹುಚ್ಚಮ್ಮ ಅವರ ಮಗ ಕಣ್ಣಪ್ಪ, ತನ್ನ ವೃದ್ಧ ಪೋಷಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW