ಕಾನ್ಪುರ: ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯ ಮೊಬೈಲ್ ಸ್ಫೋಟಗೊಂಡು ಮಹಿಳೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಫರೂಕಾಬಾದ್ ಜಿಲ್ಲೆಯ ನಹ್ರೈಯಾ ಗ್ರಾಮದ ನಿವಾಸಿ ಪೂಜಾ (28) ಮೃತ ಮಹಿಳೆಯಾಗಿದ್ದಾರೆ.
ಘಟನೆಯ ವಿವರ: ಮಹಿಳೆ ಸ್ಕೂಟಿಯಲ್ಲಿ ಕಾನ್ಪುರಕ್ಕೆ ತೆರಳುತ್ತಿದ್ದರು.ಈ ವೇಳೆಕಾನ್ಪುರ-ಅಲಿಗಢ ಹೆದ್ದಾರಿಯ ಚೌಬೆಪುರ ಪೊಲೀಸ್ ಠಾಣೆ ಪ್ರದೇಶದ ಮನ್ಪುರ್ ಗ್ರಾಮದ ಬಳಿಯ ಅವರ ಮೊಬೈಲ್ ಇದ್ದಕ್ಕಿದ್ದಂತೆ ಸ್ಫೋಟ ಆಗಿದೆ. ಸ್ಫೋಟ ಸಂಭವಿಸಿದ ತಕ್ಷಣ ಅವರ ಸ್ಕೂಟಿ ನಿಯಂತ್ರಣ ಕಳೆದುಕೊಂಡು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಸ್ಕೂಟಿ ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟುಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA