ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆನೆ ದಾಳಿಗೆ ಮತ್ತೊಂದು ಸಾವು ಸಂಭವಿಸಿದೆ. ಅಸ್ಸಾಂ ಮೂಲದ ಮಹಿಳೆ ಅಜಬಾನು(37) ಆನೆ ದಾಳಿಗೆ ಬಲಿಯಾದ ಮಹಿಳೆಯಾಗಿದ್ದಾರೆ.
ಅಜಬಾನು ಅವರು ಇತರ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದರು. ಆಗ ಆನೆ ದಾಳಿ ಮಾಡಿದೆ. ದಾಳಿ ಮಾಡಿದಾಗ ಅಜಬಾನು ಆನೆಯ ದಾಳಿಗೆ ಸಿಲುಕಿದ್ದಾರೆ.
ಕೂಡಲೇ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಅವರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಹಿಳೆ ಸಾವನ್ನಪ್ಪುತ್ತಿದ್ದಂತೆಯೇ ಅಲ್ಲಿನ ಜನರು ಆಕ್ರೋಶಿತರಾಗಿದ್ದಾರೆ. ಆನೆಗಳು ನಿರಂತರ ದಾಳಿ ನಡೆಸಿ ಪ್ರಾಣಗಳನ್ನೇ ಕಿತ್ತುಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಲಿಬೆಟ್ಟ ಆಸ್ಪತ್ರೆ ಮುಂದೆ ಜಮಾಯಿಸಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


