ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಮೇಲ್ಸೇತುವೆ ಮೇಲೆ ನಡೆದಿದೆ.
ಬಸ್ ಚಕ್ರ ಹರಿದ ಪರಿಣಾಮ ಸೀಮಾ(21) ಸ್ಥಳದಲ್ಲೇ ಸಾವನ್ನಪ್ಪಿದರೆ, ಒಂದೂವರೆ ವರ್ಷದ ಹೆಣ್ಣು ಮಗು ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಬಸ್ ಡಿಕ್ಕಿಯಾದ ರಭಸಕ್ಕೆ ದಂಪತಿ ನೆಲಕ್ಕೆ ಬಿದ್ದಾಗ ಸೀಮಾ ಅವರ ಮೇಲೆ ಬಸ್ ನ ಹಿಂಬದಿ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.