ಬೆಂಗಳೂರು: ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ವಾಷಿಂಗ್ ಮೆಷಿನ್ ಖರೀದಿಸಿದ್ದು, ಈ ಸಂಬಂಧ ವಿಡಿಯೋ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಈ ವಿಡಿಯೋ ನೋಡಿ ನನ್ನ ದಸರಾ ಹಬ್ಬದ ಸಂಭ್ರಮ ಹಿಮ್ಮಡಿಯಾಯಿತು ಎಂದಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಖುಷಿ ಹಂಚಿಕೊಂಡಿರುವ ಸಿಎಂ, ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು ಎಂದಿದ್ದಾರೆ.
ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ ಎಂದು ಅವರು ಹೇಳಿದ್ದಾರೆ.
ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC