ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ. ಬಸವರಾಜು ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ವಿರುದ್ಧ ಜಿಲ್ಲಾ ಕಚೇರಿ ಸಿಬ್ಬಂದಿಗಳಿಗೆ, ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಿರುಕುಳ, ಮಾನಸಿಕ ಹಿಂಸೆ, ಮಹಿಳಾ ಸಿಬ್ಬಂದಿಗಳ ಜೊತೆ ದುರ್ನಡತೆ, ದಬ್ಬಾಳಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ, ಸಾರ್ವಜನಿಕರ ಮುಂದೆ ಸಿಬ್ಬಂದಿಗಳನ್ನು ಅವಮಾನಿಸುತ್ತಿದ್ದರು ಎನ್ನುವ ಆರೋಪಗಳಿದ್ದವು.


