ತುಮಕೂರು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಹಿಳೆಯಲ್ಲಿ ಕೌಶಲ್ಯ ಹೆಚ್ಚಿಸುವ ತರಬೇತಿ ನೀಡಲು ಆಸಕ್ತ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ತರಬೇತಿ ಸಂಸ್ಥೆಗಳು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಲ್ಲಿ ನೋಂದಣಿಯಾಗಿದ್ದು, Job Roleಗಳಿಗೆ ಮಾನ್ಯತೆ (Accredition) ಪಡೆದಿರಬೇಕು. ಆಯ್ಕೆಯಾದ ತರಬೇತಿ ಸಂಸ್ಥೆಗಳು ಮಹಿಳೆಯರಿಗೆ ಹೊಲಿಗೆ/ಎಂಬ್ರಾಯಿಡರಿ/ ಕಂಪ್ಯೂಟರ್ ಸೇರಿದಂತೆ ವಿವಿಧ ತರಬೇತಿ ನೀಡತಕ್ಕದ್ದು.
ಆಸಕ್ತ ಸಂಸ್ಥೆಗಳು ಪ್ರಸ್ತಾವನೆಯೊಂದಿಗೆ ವಿವಿಧ ತರಬೇತಿ ನೀಡಲು ಹೊಂದಿರುವ ಮೂಲಭೂತ ಸೌಕರ್ಯಗಳು ಹಾಗೂ ಮತ್ತಿತರೆ ಅಗತ್ಯ ದಾಖಲಾತಿಗಳನ್ನು ಡಿಸೆಂಬರ್ 18ರೊಳಗಾಗಿ ನಗರದ ಬಾಲಭವನ ಆವರಣದಲ್ಲಿರುವ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx