ಬೆಳಗಾವಿ : ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸವದತ್ತಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ತಿಳಿಸಿದರು.
ದೇವರು–ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಂಕರ ಮಾತನಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಮಾಡಿ ಎಂದು ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ಯಾವ ಮನುಷ್ಯರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ ತಾನೆ? ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296