ತುಮಕೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ವೇದಿಕೆಯ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ವಿಶ್ವ ಮಾನವ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ನಹಿದಾ ಜಮ್ ಜಮ್ ಅವರು ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡಿ, ಸಮಾಜದಲ್ಲಿ ಇಂದಿಗೂ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಹ ವಾತಾವರಣ ಹೆಚ್ಚುತ್ತಿದೆ ಎಂದರು.
ನಮ್ಮ ಪುರುಷರಿಗೆ ನಾವು ಇಂದು ಗುಡ್ ಟಚ್ ಮತ್ತು ಬ್ಯಾಡ್ ಟಚ್ ಮತ್ತು ಗುಡ್ ಸೀ ಮತ್ತು ಬ್ಯಾಡ್ ಸೀ ಗಳನ್ನು ತಿಳಿಸಿಕೊಡುವ ಅಗತ್ಯವಿದೆ. ಜೊತೆಗೆ ಮಹಿಳೆಗೆ ಮಹಿಳೆಯೇ ಶತ್ರುವಾಗುತ್ತಿರುವುದು ವಿಷಾದನೀಯ ಸಂಗತಿ ಎಂದರಲ್ಲದೇ, ಮಹಿಳೆ ತಾನು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲು, ಅನ್ಯಾಯದ ವಿರುದ್ಧ ಪ್ರತಿಭಟಿಸುವ ಗುಣ ಬೆಳೆಸಿಕೊಳ್ಳಿ ಮತ್ತು ಮಹಿಳೆಯರಿಗೆ ಮಹಿಳೆಯರೇ ಹೆಚ್ಚಿನ ಸಹಾಯ–ಸಹಕಾರ ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಸಂತ ಟಿ.ಡಿ. ಮಾತನಾಡಿ, ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು, ಯಾವ ಮಹಿಳೆ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಾಳೊ ಅವಳೇ ನಿಜವಾದ ಸಬಲೆ ಎಂದರು.
ತುಮಕೂರಿನ ಜಿಲ್ಲಾ ನ್ಯಾಯಾಲದಲ್ಲಿ ಸಾರ್ವಜನಿಕ ಸರ್ಕಾರಿ ಅಭಿಯೋಜಕರಾದ ಕವಿತಾ ವ್ಹಿ.ಎ. ಮಾತನಾಡಿ, ಸಮಾಜದಲ್ಲಿ ಮಹಿಳೆಯ ರಕ್ಷಣೆಗೆ ಕಾನೂನಿನಲ್ಲಿ ಇರುವ ವಿವಿಧ ಅನುಕೂಲಕರ ಕಾನೂನುಗಳ ಬಗ್ಗೆ ತಿಳಿಸಿದರು ಮತ್ತು ಮಹಿಳೆಯರಿಗೆ 147 ಕ್ಕಿಂತ ಹೆಚ್ಚಿನ ಕಾನೂನು ಇವೆ. ಆದರೂ ಮಹಿಳೆಯರಿಗೆ ಇಂದು ರಕ್ಷಣೆಯ ಅಗತ್ಯವು ಹಿಂದಿಗಿಂತ ಈಗ ಹೆಚ್ಚಾಗಿದೆ ಎಂದರು.
ಇತ್ತೀಚೆಗೆ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣಗಳಲ್ಲಿ ಪುರುಷರು ಹಾಗೂ ಮಹಿಳೆಯರು ಸೇರಿ ನಡೆಸುವ ಒಂದು ಕುತಂತ್ರವಾಗಿದೆ. ಆದರೆ ಇದರಲ್ಲಿ ಹೆಚ್ಚಿನ ಪಾಲು ಮಹಿಳೆಯರೇ ಇರುವುದು ವಿಷಾದದ ಸಂಗತಿ ಎಂದರು.
ಡಾ. ಅಶ್ಪಾಖ್ ಅಹಮದ್ ಬಿ.ಎ. ಕಾರ್ಯಕ್ರಮ ನಿರೂಪಿಸಿದರು, ಡಾ.ಕೃಷ್ಣಾ ನಾಯಕ್ ಸ್ವಾಗತಿಸಿದರು, ಕಾರ್ಯಕ್ರಮ ಸಂಯೋಜಕರಾದ ಡಾ.ಹುಸ್ನಾ ಸುಲ್ತಾನ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಡಾ.ಫಾತಿಮಾ—ತು–ಜೋಹರಾ ಜಬೀನ್ ರವರು ವಂದನಾರ್ಪಣೆಯನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಡಾ.ಹರಿದಾಸ್, ಡಾ.ತಿಪ್ಪೇಸ್ವಾಮಿ ಜಿ., ಡಾ.ಅನಸೂಯ ಕೆ.ವಿ., ಎ.ಆರ್.ಮಹೇಶ ಹಾಗೂ ಚಿತ್ರಕಲಾ ಕಾಲೇಜು ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಮತ್ತು ಪದವಿ ಕಾಲೇಜಿನ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4