ತುಮಕೂರು: ಜಿಲ್ಲೆ ಪಾವಗಡ ತಾಲ್ಲೂಕಿನ ತಿರುಮಣಿ ಸಮೀಪ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಬಂಡೆ ಬ್ಲಾಸ್ಟ್ ದುರಂತ ಸೋಮವಾರ ಸಂಜೆ 4 ಗಂಟೆಯಲ್ಲಿ ಸಂಭವಿಸಿದೆ.
ಈ ಘಟನೆದಲ್ಲಿ ರಾಯಚೂರು ಮೂಲದ ಬಸವರಾಜು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಮತ್ತು ಅಚ್ಚಮ್ಮನಹಳ್ಳಿಯ ಶಿವಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ವಿವರ:
KSPDCL ನಿಂದ 1002 ಎಕರೆ ಪ್ರದೇಶವನ್ನು ಸೋಲಾರ್ ಪಾರ್ಕ್ ನಿರ್ಮಾಣಕ್ಕೆ JSW ಕಂಪನಿಗೆ ನೀಡಲಾಗಿತ್ತು, ಪಾರ್ಕ್ ನಿರ್ಮಾಣಕ್ಕಾಗಿ ಬಂಡೆ ಬ್ಲಾಸ್ಟ್ ಮಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಸಮೀಪದಲ್ಲಿ ಇದ್ದ ಬಸವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದು ಕಾರ್ಮಿಕ ಶಿವಯ್ಯ ಗಂಭೀರ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ, ಇದರಿಂದಾಗಿ ಅಕ್ಕಪಕ್ಕದ ಜಾಗದಲ್ಲಿ ಹಾಗೂ ಬೆಟ್ಟಕ್ಕೂ ಬೆಂಕಿ ಹಬ್ಬಿದ್ದು, ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಆದರೆ ಪೊಲೀಸರು ಸ್ಥಳೀಯರನ್ನು ಸ್ಥಳಕ್ಕೆ ಬರದಂತೆ ತಡೆದಿದ್ದು, ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನ ಬ್ಲಾಸ್ಟ್ ಮಾಡುವ ವೇಳೆ ಬಳಸಿರುವುದರಿಂದ ದುರಂತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗುತ್ತಿದೆ.
ಸದ್ಯ ಘಟನಾ ಸ್ಥಳಕ್ಕೆ KSPSCL Aee Mahesh ಗ್ರಾಮಾಂತರ ಸಿಪಿಐ ಗಿರೀಶ್ ಬೇಟೆಯಾಡಿ ಪರಿಶೀಲಿಸುತ್ತಿದ್ದು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4