ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ.
ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಈ ಘಟನೆ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.
ಕಟ್ಟಡದ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಭುಕುಸಿತ ಉಂಟಾಗಿದ್ದು, ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ, ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್ ತಂಡ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ಮಾಡಿ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಣ್ಣಿನಡಿ ಸಿಲುಕಿದ್ದ ಇನ್ನೋರ್ವ ಕಾರ್ಮಿಕ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು.
ಕಾರ್ಮಿಕನ ರಕ್ಷಣೆಗೆ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಏಳು ಗಂಟೆಯ ಸುಮೃಿ ಎನ್‌ಡಿಆರ್‌ಎಫ್ ತಂಡ ಮೃತದೇಹವನ್ನು ಹೊರತೆಗೆದಿದೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


