ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ಸದ್ಯ ಹಲ್ಲೆಗೊಳಗಾದವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಮಿಕರ ಕೈ ಕಾಲು ಕಟ್ಟಿ,ಕಾಲ ಮೇಲೆ ನಿಂತು ಪೈಪ್ ನಿಂದ ಹಲ್ಲೆ ನಡೆಸಿ ಅಂಗಾಲು, ಬೆನ್ನು, ಸೊಂಟದ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಿಜಯಪುರದ ಹೊರವಲಯದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಈ ಘಟನೆ ನಡೆದಿದೆ.
ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಎಂಬಾತ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಎಂಬ ಮೂವರು ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ. ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ ಪೈಪ್ ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು, ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ವಾಪಸ್ ಬರಲು ವಿಳಂಬ ಮಾಡಿದ್ದಕ್ಕೆ ಮಾಲಿಕ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಮಿಕರು ಎಷ್ಟೇ ಬೇಡಿಕೊಂಡರೂ ಬಿಡದೆ ಮಾಲಿಕ ಹಲ್ಲೆ ಮಾಡಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx