ನವದೆಹಲಿ: ಧೈರ್ಯವಿದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ನಪುಂಸಕನ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನಿಸುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾರ ಮಗನನ್ನು ಬೆಳೆಸಬೇಕು ಎಂಬುದನ್ನು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು ಹಾಗೂ ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್.. ಹುಷಾರ್ ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ.
ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ? ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296