ತುಮಕೂರು: ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಡಿಸೆಂಬರ್ 6ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಟೌನ್ ಹಾಲ್, ಅಶೋಕ ರಸ್ತೆ ಮಾರ್ಗವಾಗಿ ಚರ್ಚ್ ಸರ್ಕಲ್, ಕೋಟೆ ಆಂಜನೇಯ ಸ್ವಾಮಿ ಸರ್ಕಲ್ ಮೂಲಕ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಕಚೇರಿವರೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಾಥಾ ಕಾರ್ಯಕ್ರಮದಲ್ಲಿ ಬಸ್‌ನಿಲ್ದಾಣ, ಮಾರುಕಟ್ಟೆ, ರೈಲ್ವೆ ನಿಲ್ದಾಣಗಳಲ್ಲಿ ಏಡ್ಸ್ ನಿಯಂತ್ರಣದ ಬಗ್ಗೆ ಅರಿವು ಮೂಡಿಸಲು ಕರಪತ್ರ ಹಂಚಲಾಗುವುದು.
ಏಡ್ಸ್ ದಿನಾಚರಣೆ ಪ್ರಯುಕ್ತ ಸಂಜೆ 6 ಗಂಟೆಗೆ ನಗರದ ಡಿ.ದೇವರಾಜು ಅರಸು ಬಸ್ ನಿಲ್ದಾಣದಲ್ಲಿ ಕ್ಯಾಡಲ್ ಲೈಟ್ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆರ್.ವಿ.ಮೋಹನ್ ದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx