ತುಮಕೂರು: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ವಿದ್ಯೋದಯ ಕಾನೂನು ಕಾಲೇಜಿನ ಸಹಯೋಗದಲ್ಲಿ ಮಾರ್ಚ್ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ “ವಿಶ್ವ ಗ್ರಾಹಕರ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಜಿ.ಟಿ. ವಿಜಯಲಕ್ಷ್ಮೀ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ನಿವೇದಿತಾ ರವೀಶ್, ಹೆಚ್.ಎಸ್. ರಾಜು, ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲೆ ಶಮಾ ಸೈಯಿದಿ ಪಾಲ್ಗೊಳ್ಳಲಿದ್ದಾರೆ.
ಗ್ರಾಹಕರ ಜಾಗೃತಿ ಹಕ್ಕು ಮತ್ತು ಶಿಕ್ಷಣ ಪರಿಷತ್ತಿನ ಕಾರ್ಯದರ್ಶಿ ಹಾಗೂ ವಕೀಲ ಟಿ.ಎಸ್. ನಿರಂಜನ್ ಗ್ರಾಹಕರ ದಿನಾಚರಣೆ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಡಾ.ಮಂಟೇಸ್ವಾಮಿ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎನ್.ರವೀಶ್, ವಿದ್ಯೋದಯ ಕಾನೂನು ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕ ಎನ್.ಹೆಚ್.ಕುಮಾರ್ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4