ಪಾವಗಡ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲೆ, ಪ್ರಬಂಧ ಸ್ಪರ್ಧೆ, ಲೀಫ್ ಆರ್ಟ್ ಮತ್ತು ಭಿತ್ತಿಪತ್ರ ರಚನೆ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು.
ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಮುಖ್ಯಶಿಕ್ಷಕರಾದ ನರಸಿಂಹಪ್ಪ ಎಸ್ ಅವರ ನೇತೃತ್ವದಲ್ಲಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಿನೀಶ್ ಎಂ, ಲೀಲಾವತಿ ಸಿ, ನಾಗೇಂದ್ರ ಹಾಗೂ ವಿಜ್ಞಾನ ಶಿಕ್ಷಕರಾದ ಮರಿಯಾ, ಜೋಬಿನ್, ಹೇಮಲತಾ ಉಪಸ್ಥಿತರಿದ್ದರು.
ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಈ ಮೂಲಕ ಪ್ರಾಯೋಗಿಕ ಅರಿವು ಮೂಡಿಸಿದಂತಾಯಿತು ಎಂದು ಶಾಲಾ ಮುಖ್ಯಶಿಕ್ಷಕರು ತಿಳಿಸಿದರು.
ವರದಿ: ನಂದೀಶ್ ನಾಯ್ಕ್, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


