ಪಾವಗಡ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ಆವರಣದಲ್ಲಿ ಮಂಗಳವಾರ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ಸಿಡಿಪಿಓ ಸುನಿತಾ ಅವರು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಭೂಮಿಯ ವಾತಾವರಣದ ಸಮತೋಲನ ಕಾಪಾಡಲು ಪ್ರಕೃತಿ ರಕ್ಷಣೆ ಅತ್ಯಗತ್ಯ. ಪ್ರಕೃತಿಯನ್ನು ಹಾಳು ಮಾಡಿದರೆ ಮನುಷ್ಯನ ಉಳಿವೇ ಪ್ರಶ್ನೆ. ಗಿಡ-ಮರ ಬೆಳೆಸಿ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ನಾಗರಾಜ್, ಪಿಡಿಓ ರಂಗಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ವಸಂತ್ ಕುಮಾರ್, ಶಿಕ್ಷಕರಾದ ಪೃಥ್ವಿರಾಜ್, ಸರಸ್ವತಿ, ಪ್ರಕಾಶ್, ಜಯಣ್ಣ, ಇಲಾಖೆಯ ನಂದೀಶ್ ಹಾಗೂ ಅಂಗನವಾಡಿ ಶಿಕ್ಷಕರು ಉಪಸ್ಥಿತರಿದ್ದರು.
ಸಿ.ಕೆ.ಪುರ ಸರ್ಕಾರಿ ಮಾದರಿ ಶಾಲೆ, ಶಾಂತಿನಿಕೇತನ, ಜ್ಞಾನವಾಹಿನಿ ಮತ್ತು ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆಯ ಕುರಿತು ತಮ್ಮ ಕಲ್ಪನೆಯನ್ನು ಚಿತ್ರಗಳ ಮೂಲಕ ಅನಾವರಣಗೊಳಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


