ತುಮಕೂರು: ನಗರದ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಬಿ.ವಿ.ಎ ವಿದ್ಯಾರ್ಥಿಗಳಿಂದ ಚಿತ್ರಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾಂಶುಪಾಲ ಸಿ.ಸಿ.ಬಾರಕೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ವ ಮಾನವ ಸಭಾಂಗಣದಲ್ಲಿ ಬುಧವಾರ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ನಾಡಿನ ಹಿರಿಯ ಚಿತ್ರಕಲಾವಿದ ಪಿ.ಎಸ್.ಗ್ರಾಮ್ ಪುರೋಹಿತ್ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾಂಶುಪಾಲ ಸಿ.ಸಿ.ಬಾರಕೇರ ವಹಿಸಿವರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ತರನ್ನುಂ ನಿಖತ್.ಎಸ್, ವಿಶ್ವವಿದ್ಯಾ ನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಬಿ.ಕರಿಯಣ್ಣ ಹಾಗೂ ಅತಿಥಿಗಳಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಜಿ.ಎಲ್.ನಟರಾಜು, ಕಾಳಜಿ ಫೌಂಡೇಶನ್ ನಿರ್ದೇಶಕ ಎಂ.ಎಸ್. ಗಣೇಶ್ ಮಾರನಹಳ್ಳಿ, ಕಾಳಜಿ ಫೌಂಡೇಶನ್ ಕಾನೂನು ಸಲಹೆಗಾರರಾದ ಶಿವಕುಮಾರ್ ಮೇಷ್ಟ್ರುಮನೆ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ವಿವಿಧ ಪದವಿ ವಿದ್ಯಾರ್ಥಿಗಳಿಗಾಗಿ ‘ಸ್ಥಳದಲ್ಲೇ ಚಿತ್ರ ರಚನಾ ಸ್ಪರ್ಧೆ’ಯನ್ನು ಆಯೋಜಿಸಲಾಗಿರುತ್ತದೆ. ಆಸಕ್ತ ಪದವಿ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ದೂರವಾಣಿ ಸಂಖ್ಯೆ (8147870998) ಸಂಪರ್ಕಿಸಬಹುದು.
ಚಿತ್ರಕಲಾ ಪ್ರದರ್ಶನವು ದಿನಾಂಕ: 5.6.2024 ರಿಂದ 8.6.2024 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


