ಬಾಗಲಕೋಟೆ: ಬಿವ್ಹಿವ್ಹಿ ಸಂಘದ ಬಸವೇಶ್ವರ ಕಲಾ ಮಾಹವಿದ್ಯಾಲಯದ ಆವರಣದಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ಹಾಗೂ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಸಸಿ ನೆಡುವುದರ ಮೂಲಕ ಆಚರಣೆ ಮಾಡಲಾಯಿತು. ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಎಸ್. ಸೂಳಿಭಾವಿ ಅವರು ನಾಗಲಿಂಗ ಪುಷ್ಪದ ಸಸಿ ನೆಟ್ಟು ನೀರೆರೆಯುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಎಸ್.ಆರ್. ಮುಗನೂರಮಠ, ವಿಶ್ರಾಂತ ಪ್ರಾಚಾರ್ಯ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ, ಎನ್ಎಸ್ಎಸ್ ಘಟಕದ ಕಾರ್ಯಕ್ರಮದ ಅಧಿಕಾರಿಗಳಾದ ಎಮ್.ಎಚ್ ವಡ್ಡರ, ಡಾ. ವೀರುಪಾಕ್ಷ.ಎನ್.ಬಿ ಸೇರಿದಂತೆ ಎಲ್ಲ ವಿಭಾಗದ ಪ್ರಾದ್ಯಾಪಕರುಗಳು, ಎನ್ಎಸ್ಎಸ್ ಸ್ವಯಂ ಸೇವಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


