ತುಮಕೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಡಿಸೆಂಬರ್ 10ರಂದು ಬೆಳಿಗ್ಗೆ 9:45 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಿದೆ.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಆಶೋಕ್ ಭಾಗವಹಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx