nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026
    Facebook Twitter Instagram
    ಟ್ರೆಂಡಿಂಗ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಕಡೆ ವಿಶ್ವ ತಿರುಗುತ್ತಿದೆ:  ನವಗ್ರಹ ದೇವಾಲಯ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಗೆಹ್ಲೋಟ್ ಅಭಿಮತ
    ಕುಣಿಗಲ್ February 23, 2025

    ಭಾರತದ ಕಡೆ ವಿಶ್ವ ತಿರುಗುತ್ತಿದೆ:  ನವಗ್ರಹ ದೇವಾಲಯ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಗೆಹ್ಲೋಟ್ ಅಭಿಮತ

    By adminFebruary 23, 2025No Comments2 Mins Read
    gehlot

    ತುಮಕೂರು (ಕುಣಿಗಲ್) : ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು ಘನತೆವೆತ್ತ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

    ಅವರು ಇಂದು  ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ ನೆರವೇರಿಸಿ  ಮಾತನಾಡಿದರು.

    ಭಾಷಣದ ಆರಂಭದಲ್ಲಿ ಕನ್ನಡ ದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ರಾಜ್ಯ ಪಾಲರು, ಮಠದ ಸಂತರು, ಋಷಿಮುನಿಗಳು, ಆಚಾರ್ಯರು ಮತ್ತು ಶ್ರೇಷ್ಠ ಸಂಪ್ರದಾಯಗಳು ಮತ್ತು ಪ್ರಯತ್ನಗಳಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಸಮಾರಂಭಕ್ಕೆ ಆಗಮಿಸುವ ಮೂಲಕ ನಿಮ್ಮೆಲ್ಲರ ಒಡನಾಟದಲ್ಲಿರುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ತುಮಕೂರು ಜಿಲ್ಲೆ, ಕಲ್ಪತರು ನಾಡಿನ ಕುಣಿಗಲ್ ತಾಲೂಕಿನಲ್ಲಿರುವ “ಬಿದನ ಗೆರೆ ಬಸವೇಶ್ವರ ಮಠ” ಧಾರ್ಮಿಕ ಸ್ಥಳವಲ್ಲದೆ, ಭಕ್ತರಿಗೆ ಆಧ್ಯಾತ್ಮಿಕ ಶಾಂತಿ ಮತ್ತು ಸ್ಫೂರ್ತಿಯ ಮೂಲವಾಗಿದೆ ಮತ್ತು ಸಮುದಾಯಕ್ಕೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಫೂರ್ತಿಯ ಕೇಂದ್ರವಾಗಿದೆ ಎಂದರು.

    ಬಸವೇಶ್ವರರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾಜ ಸುಧಾರಣೆಗೆ ಸಹಕಾರಿಯಾಗಿದೆ. ಇಲ್ಲಿಗೆ ಬರುವ ಜನರು ಬಸವೇಶ್ವರರ ಬೋಧನೆಗಳನ್ನು ಆಸ್ವಾಧಿಸುವ ಜೊತೆಗೆ ಜೀವನದಲ್ಲಿ ನೈತಿಕತೆ, ಸಮಾನತೆ ಮತ್ತು ಭಕ್ತಿಯನ್ನು ಅನುಸರಿಸಲು ಸ್ಫೂರ್ತಿ ಪಡೆಯುತ್ತಾರೆಂದರು.

    ನಮ್ಮ ಋಷಿಮುನಿಗಳು, ಮತ್ತು ಗುರುಗಳು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಾ ಬಂದಿರುವ ನಮ್ಮ ಸಂಸ್ಕೃತಿಯು ಶಾಶ್ವತವಾಗಿದೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ ಮತ್ತು ವಿಶ್ವ ಕಲ್ಯಾಣ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ.ಸಾಧುಗಳು, ಸಂತರು, ಆಚಾರ್ಯರು ಮತ್ತು ಋಷಿಮುನಿಗಳು ವಿಶ್ವ ವೇದಿಕೆಯಲ್ಲಿ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜವನ್ನು ಹಾರಿಸಿದ್ದಾರೆಂದರು.

    ಈ ಪವಿತ್ರ ಸ್ಥಳದಲ್ಲಿ ವಿಶ್ವವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಶ್ರೀ ಶನೇಶ್ವರ ಸ್ವಾಮಿ ಮತ್ತು ನವಗ್ರಹಗಳ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಪ್ರದೇಶವನ್ನು “ಕರ್ನಾಟಕದ ಶನಿ ಸಿಂಗನಾಪುರ” ಎಂದೂ ಕರೆಯುತ್ತಾರೆ. ಶ್ರೀ ಮಠದ ಪೀಠಾಧೀಶ್ವರರಾದ ಧನಂಜಯ ಗುರೂಜಿಯವರು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ರಕ್ಷಕರ ಜೊತೆಗೆ ಚಿಂತನಶೀಲರು ಮತ್ತು ಸಂವೇದನಾಶೀಲರು ಎಂದು ಬಣ್ಣಿಸಿದರು.

    ಬಹು ಆಯಾಮದ ಸಂಸ್ಥೆಯಾಗಿರುವ ಈ ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. ಇಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ದಾಸೋಹ ಅಂದರೆ ಅನ್ನದಾನವನ್ನು ನೀಡಲಾಗುತ್ತದೆ.ಸಮಾಜದಲ್ಲಿ ಪ್ರಚಲಿತದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಿಮ್ಮಿಂದ ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಶ್ಲಾಘಿಸಿದರು.

    ಭಾಷಣದ ಕಡೆಯಲ್ಲಿ ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ”  ಪ್ರಾರ್ಥನೆಯೊಂದಿಗೆ, ನಾನು ಇಲ್ಲಿ ಇರುವ ಎಲ್ಲಾ ಸಂತರು ಮತ್ತು ಮಹಾಪುರುಷರಿಂದ ಆಶೀರ್ವಾದವನ್ನು ಕೋರುತ್ತೇನೆಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    ಬೆಂಗಳೂರು: ತಮ್ಮನ್ನು ಸ್ಟಿಂಗ್ ಆಪರೇಷನ್ ಮೂಲಕ ಬಲೆಗೆ ಬೀಳಿಸಲು ಕೆಲವರು ಪ್ರಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ…

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.