ಕುಂದಾಪುರ ಕನ್ನಡ ಭಾಷೆ ಮಾತನಾಡುವವರು ರಾಜ್ಯ ಮಾತ್ರವಲ್ಲ ಪ್ರಪಂಚದ ಮೂಲೆ ಮೂಲೆಯಲ್ಲೂ ನೆಲೆಸಿದ್ದಾರೆ. ಕುಂದಗನ್ನಡ ಎಂದು ಪ್ರಖ್ಯಾತಿಯ ಗ್ರಾಮೀಣ ಸೊಗಡಿನ ಭಾಷೆಗೆ ತನ್ನದೇ ಅಸ್ತಿತ್ವ ಕೊಡಬೇಕು. ಈ ಭಾಷೆ ಕೇವಲ ಹಾಸ್ಯಕ್ಕೆ ಸೀಮಿತವಾಗದೇ ಇದು ಕುಂದಾಪುರದ ಜನರ ಬದುಕಿನ ಭಾಷೆಯಾಗಿದೆ ಎನ್ನುವುದನ್ನು ತಿಳಿಸುವುದಕ್ಕಾಗಿಯೇ ವಿಶ್ವಕುಂದಾಪ್ರಕನ್ನಡ ದಿನಾಚರಣೆ ನಗರದ ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ನಡೆಯಿತು.
ಇಂದು ಮೊದಲಿಗೆ ಕುಂದಾಪುರದ ರಥವನ್ನು ಶಾಸಕ ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಲಿ, ಕಂಬಳದ ಧುರೀಣ ಶಾಂತರಾಮ್ ಶೆಟ್ಟಿ ಬಾರ್ಕೂರ್ ಎಳೆದು ಸಂಸ್ಕೃತಿಯನ್ನು ಮೆರೆದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಾಂಪ್ರದಾಯಿಕವಾಗಿ ಕಂಬಕ್ಕೆ ಕುಂದಾಪುರ ದಿನದ ಲೋಗೋ ಏರಿಸಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ಳೂರು ಭಾಗವಹಿಸಿದ್ದರು. ಉದ್ಘಾಟನೆ ಬಳಿಕ ಯಕ್ಷಗಾನ, ಹಾಡು, ನಾಟಕಗಳು ಸೇರಿದ್ದ ಜನರ ಮನಸೆಳೆದವು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


