ತುಮಕೂರು: ನಗರದ ಸರಸ್ವತಿಪುರಂ ನಲ್ಲಿರುವ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ 2024ರ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಐಕ್ಯೂಎಸಿ , ಕಾಲೇಜಿನ ಪ್ರಾಂಶುಪಾಲರಾದ ಡಾ.ಹೇಮಲತಾ ಪಿ. ಹಾಗೂ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಜಿ.ಸಿ. ಗುರುವಾರ ಆಯೋಜಿಸಿದ್ದರು.
ಕಾರ್ಯಕ್ರಮವನ್ನು ಬೆಂಗಳೂರಿನ ಭಾರತೀಯ ವಿದ್ಯಾಭವನ, ಮುಖ್ಯ ಮನಃಶಾಸ್ತ್ರಜ್ಞರಾದ ಕೀರ್ತಿ ಸಾಯಿ ರಾಜ್ ಟಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ತುಮಕೂರು ಪ್ರುಡೆನ್ಸ್ ಇಂಟರ್ ನ್ಯಾಶನಲ್ ಸ್ಕೂಲ್, ಶಾಲಾ ಸಲಹೆಗಾರಾದ ವೈಭವಿ ಸಿ ಎಂ. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು, ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296