ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ 2024ನೇ ಸಾಲಿನ “ ವಿಶ್ವ ಹಿರಿಯನಾಗರಿಕರ ದಿನಾಚರಣೆ ” ಯನ್ನು ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷಿö್ಮ ಹೆಬ್ಬಾಳ್‌ಕರ್, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು.
ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮಕ್ಕೆ ಆಗಮಿಸುವ ಹಿರಿಯ ನಾಗರಿಕರಿಗೆ ಆರೋಗ್ಯ ಮತ್ತು ಕಣ್ಣಿನ ತಪಾಸಣೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಹಿರಿಯ ನಾಗರಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ವಿಕಲಚೇನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q