ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 27ರಂದು TOURISM & PEACE (ಪ್ರವಾಸೋದ್ಯಮ ಮತ್ತು ಶಾಂತಿ)” ಎಂಬ ಸಂದೇಶದೊಂದಿಗೆ ಜಿಲ್ಲೆಯ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ಬಿ.ಎಸ್.ಬಸಂತಿ ತಿಳಿಸಿದ್ದಾರೆ.
ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 7:30 ಗಂಟೆಗೆ ಚನ್ನರಾಯನದುರ್ಗ ಬೆಟ್ಟದ ಪರ್ವತಾರೋಹಣ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ನಂತರ ಚನ್ನರಾಯನದುರ್ಗ ಬೆಟ್ಟದ ಕೆಳಗಿನ ಪ್ರವಾಸಿ ಸ್ಥಳದಲ್ಲಿ ಬೆಳಿಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ.
ವಿವಿಧ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q