ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ 2023 ಹಾಗೂ 2024ನೇ ಸಾಲಿನಲ್ಲಿ ಕ್ಷಯ ಮುಕ್ತ ಗ್ರಾಮ ಪಂಚಾಯತಿ ಎಂದು ಘೋಷಿಸಲ್ಪಟ್ಟಿರುವ ಗ್ರಾಮ ಪಂಚಾಯತಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು.
ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4