ಬೆಂಗಳೂರು ವಿವಿ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ನೀಡಿದ ಅನ್ನದಲ್ಲಿ ಹುಳುಗಳ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯ ಜಾಸ್ತಿಯಾಗಿದೆ. ಕ್ವಾಲಿಟಿ ಊಟ ಕೊಡ್ತಿಲ್ಲ. ನಾವೇನಾದರೂ ಪ್ರಶ್ನೆ ಮಾಡಿದ್ರೆ ನಮ್ಮ ಮೇಲೆ ದಬ್ಬಾಳಿಕೆ ಮಾಡ್ತಾರೆ.
ಗೊತ್ತಿಲ್ಲದೆ ಊಟದಲ್ಲಿ ಹುಳುಗಳು ತಿಂದರೆ ಆರೋಗ್ಯ ಸಮಸ್ಯೆಯಾಗಿದೆ. ಹುಳು ಇರುವ ಆಹಾರ ತಿಂದು ಜೀವಕ್ಕೆ ಅಪಾಯವಾದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.


