ಹಾವೇರಿ: ತಾಲೂಕಿನ ನೆಗಳೂರು ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವನ್ನ ಭಾವೈಕ್ಯತೆಯಿಂದ ಆಚರಿಸಲಾಯಿತು. ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಮುಸ್ಲಿಂ ಬಾಂಧವರು ಗಣೇಶನಿಗೆ ಪೂಜೆ ಸಲ್ಲಿಸಿ ಸೌಹಾರ್ಹತೆ ಸಾರಿದರು.
ಸರ್ವಧರ್ಮ ಮಹಾ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಮರು ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಿದರಲ್ಲದೇ, ಹಿಂದೂ–ಮುಸ್ಲಿಂ ಬಾಂಧವರೆಲ್ಲ ಸೇರಿ ಗಣಪನಿಗೆ ಪೂಜೆ ಸಲ್ಲಿಸಿ ಮಾರ್ಲಾಪಣೆ ಮಾಡಿದರು. ನಂತರ ಗ್ರಾಮದ ಪ್ರಮುಖ ಬೀದಿಯಲ್ಲಿ ಈದ್ ಮಿಲಾದ್ ಹಬ್ಬ ಮೆರವಣಿಗೆ ಮಾಡಿ ಅರ್ಥಪೂರ್ಣವಾಗಿ ಆಚರಿಸಿದರು.
ಪ್ರತಿ ವರ್ಷ ಗ್ರಾಮದಲ್ಲಿ ಸರ್ವಧರ್ಮ ಆಶಯದೊಂದಿಗೆ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಗುತ್ತದೆ. ವಿವಿಧ ಧರ್ಮದ ಜನರೂ ಭಾಗವಹಿಸಿ ಪೂಜೆ ಸಲ್ಲಿಸುತ್ತಾರೆ. ಮುಸ್ಲಿಮರು ಸಹ ಪ್ರಾರ್ಥನೆ ಸಲ್ಲಿಸಿ ಪೂಜೆಯನ್ನ ಮಾಡುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC