ಬೆಳಗಿನ ಹೊತ್ತಿಗೆ ಹಲವು ರೀತಿಯ ಹಸಿರು ಜ್ಯೂಸ್‌ಗಳನ್ನು ಕುಡಿದರೆ ಆರೋಗ್ಯಕ್ಕೆ ಒಳಿತು. ಅಂಥದ್ದೇ ಹಸಿರು ಜ್ಯೂಸ್‌ಗಳ ಪೈಕಿ ಒಂದು ಪಾಲಕ್ ಸೊಪ್ಪಿನದ್ದು. ರುಚಿಗೆ ಬೇಕಿದ್ದರೆ ಶುಂಠಿ, ನಿಂಬೆ ರಸಗಳನ್ನೆಲ್ಲ ಬೆರೆಸಿಕೊಂಡರೆ ಹಸಿರು ಜ್ಯೂಸ್‌ಗಳು ಬಾಯಿಗೂ ರುಚಿ ದೇಹಕ್ಕೂ ಹಿತ ನೀಡುತ್ತದೆ. ಹಲವು ರೀತಿಯ ಉತ್ಕರ್ಷಣ ನಿರೋಧಕಗಳು, ಕಬ್ಬಿಣ, ಕ್ಯಾಲ್ಸಿಯಂನಂಥ ಅಗತ್ಯ ಖನಿಜಗಳು, ಎ, ಸಿ, ಇ ನಂಥ ಮಹತ್ವದ ಜೀವಸತ್ವಗಳನ್ನು ಒಳಗೊಂಡ ಈ ಸೊಪ್ಪಿನಲ್ಲಿ ನಾರು ಸಹ ಹೇರಳವಾಗಿದೆ.
ತುಳಸಿಯನ್ನು ಆಹಾರ ರೂಪದಲ್ಲಿ ಸೇವಿಸಿದರೆ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬೆಳಗ್ಗೆ ಮಾಡುವ ಚಹಾಗೆ ತುಳಸಿಯ ತಾಜಾ ಎಲೆಗಳನ್ನು ಹಾಕಿ ಬಿಸಿ ಬಿಸಿಯಾಗಿ ಕುಡಿದರೆ ನೆಗಡಿ ಹಾಗೂ ಕಟ್ಟಿದ ಮೂಗು ಸರಾಗವಾಗುತ್ತದೆ. ತುಳಸಿಯ ಪಾನಕ ಮಾಡಿ ಸಹ ಕುಡಿಯಬಹುದು. ಇತರ ಹಣ್ಣಿನ ಜ್ಯೂಸ್‌ಗಳಿಗೆ ತುಳಸಿಯ ಎಲೆಗಳನ್ನು ಬೆರೆಸಿ ಕುಡಿಯಬಹುದು. ತುಳಸಿ ಎಲೆಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನಿಷಿಯಂ ಮುಂತಾದ ಪೋಷಕಾಂಶಗಳಿದ್ದು, ಇದನ್ನು ಅನ್ನಕ್ಕೂ ಬೆರೆಸಿ ತಿನ್ನಬಹುದು.
ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತೆ ಮಾವಿನ ಕಾಯಿ
ಮಾವಿನ ಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹಿಮೋಫಿಲಿಯಾ ಮತ್ತು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮಾವಿನ ಕಾಯಿ ಕ್ಯಾರೊಟಿನಾಯ್ಡ್ಗಳಲ್ಲಿ ಸಮೃದ್ಧವಾಗಿವೆ, ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಮಾವಿನ ಕಾಯಿ ತಿನ್ನುವುದರಿಂದ ನಿರ್ಜಲೀಕರಣವನ್ನು ತಡೆಯಬಹುದು ಎನ್ನುತ್ತಾರೆ ವೈದ್ಯರು.
*ಈ ಹಣ್ಣು ಸೇವನೆ ಮಾಡಿದ್ರೆ ಒಂದೇ ತಿಂಗಳಲ್ಲಿ ತೂಕ ಕಡಿಮೆ ಮಾಡಿಕೊಳ್ಳಬಹುದು!
ಸಪೋಟಾದಲ್ಲಿರುವ ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಮೂಳೆಗಳನ್ನು ಬಲಪಡಿಸುತ್ತದೆ. ಈ ಹಣ್ಣುಗಳು ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಆಹಾರದಲ್ಲಿ ಸಪೋಟಾ ಹಣ್ಣನ್ನು ಸೇರಿಸಿಕೊಳ್ಳಬಹುದು. ಇತರ ಹಣ್ಣುಗಳಿಗೆ ಹೋಲಿಸಿದರೆ ಸಪೋಟಾ ಹಣ್ಣಿನಲ್ಲಿ ಕ್ಯಾಲೋರಿ ಕಡಿಮೆ. ಇದರೊಂದಿಗೆ ನೀವು ರುಚಿಯನ್ನು ಆನಂದಿಸುತ್ತಾ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA