ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆಯ ಕುರಿತು ಟ್ವೀಟ್ ಮಾಡಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿರುವ ಕಾಂಗ್ರೆಸ್, ಇಂದು ಕೂಡ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ವಿರುದ್ಧ ಮತ್ತಷ್ಟು ವಾಗ್ದಾಳಿ ನಡೆಸಿದೆ.
ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಮುಖ್ಯಮಂತ್ರಿಗಳೆಂದರೆ ಪೊಪೆಟ್‍ಗಳು ಇದ್ದ ಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ. ಬಿ.ಎಸ್.ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಬಸವರಾಜ ಬೊಮ್ಮಾಯಿ ಅವರು ಯಾವ ಲೆಕ್ಕ ಎಂದು ಲೇವಡಿ ಮಾಡಿದೆ.
ಸಂತೋಷ ಕೂಟಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ವೈಫಲ್ಯಗಳ ಕೊಡ ತುಂಬಿದೆ ಎಂದು ಕಾಂಗ್ರೆಸ್ ಕಾಲೆಳೆದಿದೆ.
ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಮನೆಗೆ ಕಳಿಸಲಾಗಿತ್ತು. ಈಗ ಬಸವರಾಜ ಬೊಮ್ಮಾಯಿ ಅವರನ್ನು ಒಂದನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. ಒಂದೇ ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ ಪೊಪೆಟ್ ಸಿಎಂಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಹೇಳಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy