ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಇಂದೇ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಏರ್ ಪೋರ್ಟ್ ಲೋಕಾರ್ಪಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಇದು ನನ್ನ ಜೀವನದಲ್ಲಿ ಮರೆಯಲಾಗದ ಶುಭದಿನ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹುಟ್ಟುಹಬ್ಬದ ಹಿನ್ನೆಲೆ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೊಂದು ವಿಶೇಷ ಸಂದರ್ಭ ನನಗೆ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾದ ಘಳಿಗೆಯಾಗಿದೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


