ನವದೆಹಲಿ: ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.
ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಅವರಿಗೆ ರಾಜಕೀಯ ಬಿಡುವು ಅನ್ನುವುದೇ ಇಲ್ಲ, ರಾಜಕೀಯದಲ್ಲಿ ನಿರಂತರವಾಗಿ ಬಿಎಸ್ ವೈ ಇರುತ್ತಾರೆ, ಹೋರಾಟವೇ ಅವರ ಬದುಕಿನ ಮೂಲಮಂತ್ರ. ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪನವರ ಬಲ, ಮಾರ್ಗದರ್ಶನ ಇರಲಿದೆ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz