ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ
ಹೇಳಿದ್ದರು.
ಸದ್ಯ ಈ ವಿಚಾರವಾಗಿ ಬೆಳಗಾವಿಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಮಾತನಾಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಮೂರ್ನಾಲ್ಕು ತಿಂಗಳಲ್ಲಿ ಏನು ಅಭಿವೃದ್ಧಿ ಮಾಡಲು ಆಗುತ್ತೆ? ಹೊಸ ಸರ್ಕಾರದಲ್ಲಿ ಮಂತ್ರಿ ಆಗಬೇಕೆಂದು ಎಲ್ಲರೂ ಸುಮ್ಮನಿದ್ದಾರೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಗುಜರಾತ್ ಮಾದರಿಯಲ್ಲೇ ಹೊಸಬರಿಗೆ ಅವಕಾಶ ನೀಡಬೇಕು. ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡ್ತಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy