ಲಕ್ನೋ: ಯುಪಿಯ ಬಂದಾ ಜಿಲ್ಲೆಯಲ್ಲಿ ಧಾರುಣ ಘಟನೆ ನಡೆದಿದೆ. ಗುರುವಾರ ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ ಸುಮಾರು 36 ಮಂದಿ ಪ್ರಯಾಣಿಸುತ್ತಿದ್ದಾಗ ಅದು ಮಗುಚಿ ಬಿದ್ದಿದೆ.
ಬೋಟ್ ಮಾರ್ಕಾ ಘಾಟ್‌ನಿಂದ ಫತೇಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕುಟುಂಬ ಸದಸ್ಯರೊಂದಿಗೆ ರಾಖಿ ಆಚರಿಸಲು ಮಹಿಳೆಯರು ತಮ್ಮ ಗ್ರಾಮಕ್ಕೆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
ದೋಣಿಯಲ್ಲಿದ್ದವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ದೋಣಿ ಅವಘಡದಲ್ಲಿ ನಾಪತ್ತೆಯಾದ ಆರು ಮಂದಿಯನ್ನು ರಕ್ಷಿಸಲಾಗಿದೆ. ಉಳಿದವರು ಎಲ್ಲಿದ್ದಾರೆ ಎಂಬುದು ತಿಳಿದುಬಂದಿಲ್ಲ. ಪರಿಹಾರ ಕಾರ್ಯಕ್ರಮಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz