ತುಮಕೂರು: ಕೃಷಿ ಯಂತ್ರಧಾರೆ ಯೋಜನೆಯಡಿ ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡುತ್ತಿದೆ ಎಂದು ಭಾರತೀಯ ಕೃಷಿಕ ಸಮಾಜದ ತುಮಕೂರು ಜಿಲ್ಲಾ ಘಟಕ ಆರೋಪಿಸಿದೆ.
ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿರುವ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್, ಕೃಷಿ ಯಂತ್ರಧಾರೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಅಧಿಕೃತ ಸಂಸ್ಥೆಗಳು ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡಿ ಭ್ರಷ್ಟಾಚಾರ ನಡೆಸಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಪುಟ್ಟರಾಜು, ಶ್ರೀ ಸಂಧ್ಯಾ, ಪಾಂಡುರಂಗ, ರಾಜಣ್ಣ, ಆನಂದ್ ಮತ್ತಿತರು ಭಾಗವಹಿಸಿದ್ದರು.
ವರದಿ: ದಾಸಾಲುಕುಂಟೆ ಸಿದ್ದರಾಜು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz