ಚಿಕ್ಕಮಗಳೂರು: ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಪ್ರತಿಷ್ಠೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಸಿ ಬಳಿಯಲು ಪಿತೂರಿ ನಡೆಸಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ರೇಣುಕಾಚಾರ್ಯ ಆರೋಪಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಡೆದ ವೀರಶೈವ-ಲಿಂಗಾಯತ ಮಹಾ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ವಿಜಯೇಂದ್ರ ಅವರ ರಾಜಕೀಯ ಏಳಿಗೆಯನ್ನು ಯತ್ನಾಳ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ, ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಅವರ ಕೊಡುಗೆಗಳು ಅಪಾರವಾಗಿವೆ ಎಂದು ಹೇಳಿದರು.
ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರಿಗೆ ಇಡೀ ಲಿಂಗಾಯತ ಸಮುದಾಯದ ಬೆಂಬಲವಿರುವುದರಿಂದ ಯತ್ನಾಳ್ ಯಶಸ್ವಿಯಾಗುವುದಿಲ್ಲ, ಯತ್ನಾಳ್ ಬೇರೆಯವರ ತಾಳಕ್ಕೆ ತಕ್ಕಂತೆ ಕುಣಿಯಿುತ್ತಿದ್ದಾರೆ, ಸಮುದಾಯದ ಸ್ವಾಮೀಜಿಗಳನ್ನು “ಪೇಯ್ಡ್ ಸ್ವಾಮೀಜಿಗಳು” ಎಂದು ಕರೆದಿದ್ದಕ್ಕೆ ನಾಚಿಕೆಯಾಗಬೇಕು ಅವರಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4