ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅವರು ನಾಶ ಆಗುತ್ತಾರೆ ಎಂದು ಎಂಪಿ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಾಪದ ಕೊಡ ತುಂಬಿರುವುದಕ್ಕೆ ಇಬ್ಬರೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ. ಯತ್ನಾಳ್ ಮತ್ತು ಸೋಮಣ್ಣನವರೇ ಎಚ್ಚರ ನಾನು ಸುಮ್ಮನಿರಲ್ಲ.
ಎಲ್ಲಿಯವರೆಗೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮಾತಾಡುತ್ತೀರಿ ಅಲ್ಲಿಯವರೆಗೆ ನಾನು ಮಾತನಾಡುವೆ ಎಂದು ಎಚ್ಚರಿಕೆ ನೀಡಿದ್ದಾರೆ.


