ಹುಬ್ಬಳ್ಳಿ: ಯತ್ನಾಳ್ ಕಾಂಗ್ರೆಸ್ ಗೆ ಪಕ್ಷಕ್ಕೆ ಬಂದ್ರೆ ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬರುತ್ತೇನೆ, ನನಗೆ ಜವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದರು.
ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗೋದಿಲ್ಲ ನಮಗೂ ಇತಿ ಮಿತಿ ಇದೆ, ಹೊಸ ಬಸ್ ನಿಲ್ದಾಣ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ ಎಂದು ಹೇಳಿದರು.
ಹನಿಟ್ರ್ಯಾಪ್ ಅದು ವೈಯಕ್ತಿಕ, ಅದು ಸರ್ಕಾರದ ಯೋಜನೆ ಅಲ್ಲ, ಸದನದಲ್ಲಿ ರಾಜಣ್ಣ ಅವರ ಹೆಸರು ತೆಗೆದುಕೊಂಡಿದ್ದು ಯತ್ನಾಳ್, ಅದಕ್ಕೆ ರಾಜಣ್ಣ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4