ಬೆಂಗಳೂರು: ವಕ್ಫ್ ಕಾನೂನು ರದ್ದಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಕ್ಫ್ ವಿರುದ್ಧ ನಿರಂತರ ಹೋರಾಟ ನಡೆಯಲಿದೆ. 2ನೇ ಹಂತದ ಹೋರಾಟದ ಬಗ್ಗೆ ನಾಳೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ನಮ್ಮ ಹೋರಾಟಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇವೆ. ನಮ್ಮದು ಜನಪರ ಆಂದೋಲನ ಎಂದು ಇದೇ ವೇಳೆ ಅವರು ಹೇಳಿದರು.
ವಕ್ಫ್ ಆಸ್ತಿ ಎಂದು ಅವರು 3 ಪಾಕಿಸ್ತಾನ ಮಾಡುವ ಅಷ್ಟು ಜಾಗವನ್ನು ಕ್ರೈಮ್ ಮಾಡುತ್ತಿದ್ದಾರೆ. ನಮ್ಮ ಹೋರಾಟದಿಂದಲೇ ವಕ್ಫ್ ಆಂದೋಲನ ಇಡೀ ದೇಶದಲ್ಲಿ ಆಗ್ತಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx