ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯದ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಮಂಡಿಸಿದ್ದರು.
ಇದರ ಬೆನ್ನಲ್ಲೇ ಶಾಸಕ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಯತ್ನಾಳ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4