ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳನ್ನು ಬಿಜೆಪಿ ಹೈಕಮಾಂಡ್, ರಾಷ್ಟ್ರೀಯ ನಾಯಕರ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ವೇದಿಕೆಯಲ್ಲೇ ಎಲ್ಲವನ್ನೂ ಚರ್ಚಿಸಬೇಕು. ಯಾರೂ ಬಹಿರಂಗ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಯತ್ನಾಳ್ ನಡೆಯ ಬಗ್ಗೆ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ:
ನಾನು ಡಿನೋಟಿಫೈ ಮಾಡಿದ್ದೇನಾ? ನಾನು ತಪ್ಪೇನು ಮಾಡಿದ್ದೇನೆ? ನಾನು ಸೈನ್ ಮಾಡಿದ್ದೇನಾ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯನವರೇ, ನೀವು ದಯವಿಟ್ಟು ಒಂದು ಸಂಗತಿ ಅರ್ಥ ಮಾಡಿಕೊಳ್ರಿ. ನಿಮ್ಮ ಬಗ್ಗೆ ಕೋರ್ಟ್ ಏನು ಹೇಳಿದೆ ಎಂಬುದನ್ನು ನೋಡಿ ಎಂದು ತಿಳಿಸಿದರು.
2004ರಿಂದ ಈಚೆಗೆ ನೀವು ಸತತವಾಗಿ ಒಂದಲ್ಲ ಒಂದು ಸ್ಥಾನದಲ್ಲಿ ಇರಲಿಲ್ಲ ಎಂದಾದರೆ, ಇದು ಇನ್ಯಾರಿಗೂ ಸಾಮಾನ್ಯ ಮನುಷ್ಯನಿಗೆ ಮುಟ್ಟಲು ಸಾಧ್ಯವೇ ಇಲ್ಲ. ಮತ್ತು ಇದು ಮುಖ್ಯಮಂತ್ರಿಯ ಪತ್ನಿಗೆ ಮುಖ್ಯಮಂತ್ರಿಗೆ ಗೊತ್ತಾಗದೇ ಆಗಲು ಸಾಧ್ಯ ಇಲ್ಲ. ಈ ರೀತಿ ಕೋರ್ಟ್ ತೀವ್ರವಾಗಿ ಹೇಳಿದೆ ಎಂದರು.
ಮುಡಾದಿಂದ ಡಿನೋಟಿಫಿಕೇಶನ್, ಜಾಗ ಟ್ರಾನ್ಸ್‍ಫರ್ ಆದದ್ದು, ಅವುಗಳ ಮೌಲ್ಯ 62 ಕೋಟಿ ಎಂದದ್ದು, ಯಾವುದೋ ಜಾಗಕ್ಕೆ ಪರಿಹಾರವಾಗಿ 14 ನಿವೇಶನ ಕೊಟ್ಟದ್ದನ್ನು ವಿಜಯೇಂದ್ರ ಅವರು, ಬಿಜೆಪಿ ಮೊದಲಿನಿಂದಲೇ ಹೇಳುತ್ತಿದ್ದೇವೆ. ಮಾನ್ಯ ರಾಜ್ಯಪಾಲರ ಸ್ಯಾಂಕ್ಷನ್ ಬಳಿಕ ನೀವು ಏನೇನು ಕರಾಮತ್ತು ಮಾಡಿದ್ದೀರೆಂದು ಕೋರ್ಟ್ ಎಲ್ಲವನ್ನೂ ಸ್ಪಷ್ಟವಾಗಿ ದಾಖಲಿಸಿದೆ. ನೀವು ಬಾಬಾಸಾಹೇಬ ಡಾ. ಅಂಬೇಡ್ಕರರಿಗೆ ಅಪಮಾನ ಮಾಡಿದವರು; ಅವರನ್ನು ಎರಡೆರಡು ಬಾರಿ ಸೋಲಿಸಿದವರು. ಸಂವಿಧಾನಕ್ಕೆ ಗೌರವ ಕೊಡದ ನೀವು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸಂವಿಧಾನದ ಪ್ರತಿ ಹಿಡಿದು ಓಡಾಡಿದ್ದೀರಿ ಎಂದು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296